ಸೌತ್ ಜೋನ್ ಕ್ರೀಡಾಕೂಟ: ಬಸವಪಟ್ಟಣ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ

ಕಲಬುರಗಿ, ಆ.5: ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕಲಬುರಗಿ ದಕ್ಷಿಣ ತಾಲೂಕಿನ ಸೌತ್ ಜೋನ್ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಬಸವಪಟ್ಟಣ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕರ ವಿಭಾಗದಲ್ಲಿ ದೇವೀಂದ್ರ 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ಮಲ್ಲೇಶ್ 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಹಾಗೂ ಪವನ್ 3000 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಅರ್ಹತೆ ಪಡೆದರು.
ಬಾಲಕಿಯರ ವಿಭಾಗದಲ್ಲಿ ಪ್ರಿಯಾಂಕಾ 800 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ, ಮೇಘನಾ ಉದ್ದಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಕಲ್ಪನಾ 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿದರು. 4×100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಪ್ರಿಯಾಂಕಾ ನೇತೃತ್ವದ ತಂಡ ಪ್ರಥಮ ಸ್ಥಾನ ಪಡೆದರೆ, 4×400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಭಾಗ್ಯಶ್ರೀ ನೇತೃತ್ವದ ತಂಡ ದ್ವಿತೀಯ ಸ್ಥಾನ ಗಳಿಸಿತು.
ಇದಲ್ಲದೆ, ಸುಹಾನಿ 3000 ಮೀಟರ್ ಓಟದಲ್ಲಿ ತೃತೀಯ ಸ್ಥಾನ, ಭಾಗ್ಯಶ್ರೀ 1500 ಮೀಟರ್ ಓಟದಲ್ಲಿ ತೃತೀಯ ಸ್ಥಾನ, ರತ್ನಮ್ಮ 200 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಹಾಗೂ ತೇಜಶ್ವಿನಿ 100 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದರು.
ವಿವಿಧ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದು, ಶಾಲೆಗೆ ಹೆಮ್ಮೆ ತಂದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಯನ್ನು ಶಾಲೆಯ ಮುಖ್ಯೋಪಾಧ್ಯಾಯ ಶರಣಗೌಡ ಪಾಟೀಲ, ದೈಹಿಕ ಶಿಕ್ಷಣ ಶಿಕ್ಷಕ ಮಹೇಶ್ ಬಸರಕೋಡ, ತಂಡದ ವ್ಯವಸ್ಥಾಪಕರಾದ ಅಶೋಕ ಎಸ್. ಶಿ. ಹಾಗೂ ಬಿ.ಬಿ. ಫಾತಿಮಾ ಎಸ್. ಶಿ., ಶಾಲೆಯ ಶಿಕ್ಷಕ-ಶಿಕ್ಷಕಿಯರು, ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮಸ್ಥರು ಅಭಿನಂದಿಸಿದ್ದಾರೆ. ತಾಲೂಕು ಮಟ್ಟದ ಸ್ಪರ್ಧೆಯಲ್ಲಿಯೂ ಇದೇ ರೀತಿಯ ಸಾಧನೆ ಮಾಡಿ ಶಾಲೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂದು ಶುಭ ಹಾರೈಸಿದ್ದಾರೆ.



