ನಮ್ಮ ಕರ್ನಾಟಕ ಸೇನೆಗೆ ನೂತನ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಕಲಬುರಗಿ: ನಮ್ಮ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷ ಬಸವರಾಜ ಎಂ. ಪಡಕೋಟೆ ಅವರ ಆದೇಶದ ಮೇರೆಗೆ ಕಲಬುರಗಿಯಲ್ಲಿ ನೂತನ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ಮೊದಲ ಮಾಸಿಕ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ರಾಜ್ಯ ಪ್ರಧಾನ ಸಂಚಾಲಕ ಭೀಮಣ್ಣ ಶಕಾಪುರ ವಹಿಸಿದ್ದರು. ಕಲ್ಯಾಣ ಕರ್ನಾಟಕ ಅಧ್ಯಕ್ಷ ಸುಧೀಂದ್ರ ಎಂ. ಜೇಗೇರಿ, ಕಲಬುರಗಿ ಜಿಲ್ಲಾ ಅಧ್ಯಕ್ಷ ರುಕ್ಮಯ್ಯ ಗುತೇದಾರ್, ರೈತ ಘಟಕದ ಅಧ್ಯಕ್ಷ ಅಶೋಕ ಗುತೇದಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಮಯೂರ, ನಗರ ಘಟಕದ ಅಧ್ಯಕ್ಷ ಸುರೇಶ್ ಹೊಸಮನಿ, ಮಹಿಳಾ ಜಿಲ್ಲಾಧ್ಯಕ್ಷೆ ನಿರ್ಮಲಾ ತಳವಾರ, ಮಹಿಳಾ ವಿದ್ಯಾರ್ಥಿ ಘಟಕದ ಅಧ್ಯಕ್ಷೆ ರಕ್ಷಿತಾ ಧಾಮಾ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ಸಂಘಟನೆಯ ಬಲವರ್ಧನೆ, ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಬೇಕಾದ ಸಂಘಟನಾ ಚಟುವಟಿಕೆಗಳ ಕುರಿತು ಚರ್ಚಿಸಲಾಯಿತು. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು ಮತ್ತು ಕಾರ್ಯಕರ್ತರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಕುರಿತು ಮುಖಂಡರು ಸಲಹೆಗಳನ್ನು ನೀಡಿದರು.
ಯಡ್ರಾಮಿ ತಾಲೂಕು ಗೌರವಾಧ್ಯಕ್ಷ ಅಪ್ಪು ಗೌಡ ನೀರಡಗಿ, ಅಶೋಕ ಭೀಮಳ್ಳಿ, ವೆಂಕಟೇಶ ಗುತೇದಾರ್, ಬಸವರಾಜ ತಳವಾರ, ಶ್ರೀಧರ ಕುಳಗೇರಿ ಹಾಗೂ ಸೇಡಂ ತಾಲೂಕು ಅಧ್ಯಕ್ಷ ವಿಶ್ವನಾಥ್ ಸೇರಿ ಜಿಲ್ಲೆಯ ವಿವಿಧ ತಾಲೂಕುಗಳ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.



