ಕಲಬುರಗಿಜಿಲ್ಲೆ ಸುದ್ದಿ

ಗಿರಿ ಲೇಔಟ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕಲಬುರಗಿ: ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್‌ ನಂ. 55ರ ಗಿರಿ ಲೇಔಟ್‌ನಲ್ಲಿ 2024–25ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಯೋಜನೆಯಡಿ ₹35 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಅಲ್ಲಮಪ್ರಭು ಪಾಟೀಲ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಲ್ಲಮಪ್ರಭು ಪಾಟೀಲ, ಬಡಾವಣೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಉತ್ತಮ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ನಾಗರಿಕ ಸೌಲಭ್ಯಗಳನ್ನು ಕಲ್ಪಿಸಲು ಹಂತ ಹಂತವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಗಿರಿ ಲೇಔಟ್ ನಿವಾಸಿಗಳ ಬಹುದಿನಗಳ ಬೇಡಿಕೆಯ ಹಿನ್ನೆಲೆಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಸ್ಥಳೀಯರ ಸಹಕಾರದೊಂದಿಗೆ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಒತ್ತು ನೀಡಲಾಗುವುದು ಎಂದು ಶಾಸಕ ಪಾಟೀಲ ಹೇಳಿದರು.

ಕಾರ್ಯಕ್ರಮದಲ್ಲಿ ಆದಪ್ಪ ಬಗಲಿ, ಎಸ್.ಎಸ್. ಮೈನಾ, ಉಮೇಶ್ ಸಾಹು, ಮಹೇಶ್ ಹೊಸೂರಕರ್, ರವೀಂದ್ರ ವಿಭೂತಿ, ಸಿದ್ದಲಿಂಗ ಅನೇರ, ಲಕ್ಷ್ಮೀಕಾಂತ ಪಾಟೀಲ, ಡಾ. ಸವಿತಾ ಸೇರಿದಂತೆ ಬಡಾವಣೆಯ ಮುಖಂಡರು, ಹಿರಿಯರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button