ಯಾದಗಿರಿ

ಕೆಂಭಾವಿ ಭಾಗ ಬರಪೀಡಿತ ಪ್ರದೇಶ ಘೋಷಣೆ: ದರ್ಶನಾಪುರಗೆ ಕೃತಜ್ಞತೆ

ಕೆಂಭಾವಿ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳನ್ನು ರಾಜ್ಯ ಸರ್ಕಾರ ಬರಪೀಡಿತ ಪ್ರದೇಶವೆಂದು ಘೋಷಿಸಿರುವುದಕ್ಕೆ ಶಹಾಪುರ ಶಾಸಕ ಹಾಗೂ ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಕೆಂಭಾವಿ ಪುರಸಭೆ ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಜಿ. ಕಂಬಾರ್ ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರ ಸತತ ಕಾಳಜಿ ಹಾಗೂ ಸರ್ಕಾರದ ಮಟ್ಟದಲ್ಲಿ ನಡೆಸಿದ ಪ್ರಯತ್ನದ ಫಲವಾಗಿ ಕೆಂಭಾವಿ ಭಾಗಕ್ಕೆ ಬರಪೀಡಿತ ಪ್ರದೇಶದ ಅಧಿಕೃತ ಮಾನ್ಯತೆ ದೊರೆತಿದೆ ಎಂದು ತಿಳಿಸಿದ್ದಾರೆ.

ಮಳೆಯ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಈ ಭಾಗದ ರೈತರು, ಕೂಲಿಕಾರ್ಮಿಕರು ಹಾಗೂ ಜನಸಾಮಾನ್ಯರಿಗೆ ಬರ ಪರಿಹಾರ ಸೌಲಭ್ಯಗಳು, ಉದ್ಯೋಗ ಖಾತರಿ ಯೋಜನೆ ಸೇರಿದಂತೆ ಅಗತ್ಯ ಸರ್ಕಾರಿ ನೆರವು ದೊರೆಯಲು ಈ ಘೋಷಣೆಯಿಂದ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

ಕೆಂಭಾವಿ ಪಟ್ಟಣ ಹಾಗೂ ಗ್ರಾಮೀಣ ಭಾಗದ ಜನರ ಸಂಕಷ್ಟಕ್ಕೆ ಸ್ಪಂದಿಸಿ, ಬರಪೀಡಿತ ಪ್ರದೇಶವೆಂದು ಘೋಷಿಸುವಲ್ಲಿ ಶ್ರಮಿಸಿದ ಶಾಸಕ ದರ್ಶನಾಪುರ ಅವರಿಗೆ ಕೆಂಭಾವಿ ಪುರಸಭೆ ಹಾಗೂ ನಾಗರಿಕರ ಪರವಾಗಿ ಅನಂತ ಧನ್ಯವಾದಗಳನ್ನು ಸಲ್ಲಿಸುವುದಾಗಿ ಲಕ್ಷ್ಮೀಬಾಯಿ ಜಿ. ಕಂಬಾರ್ ತಿಳಿಸಿದ್ದಾರೆ.

janabhipraya

https://janabhipraya.com

Related Articles

Leave a Reply

Your email address will not be published. Required fields are marked *

Back to top button