ಯಾದಗಿರಿ

ಕೆಂಭಾವಿ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಮೋಚನಾ ದಿನ, ವಿಶ್ವಕರ್ಮ ಜಯಂತಿ

ಕೆಂಭಾವಿ: ಸ್ಥಳೀಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ಶ್ರೀ ವಿಶ್ವಕರ್ಮ ಜಯಂತಿಯನ್ನು ಗುರುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಶ್ರೀ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಚಾರ್ಯರು, ‘1948ರ ಸೆಪ್ಟೆಂಬರ್ 17ರಂದು ಸರ್ದಾರ್ ವಲ್ಲಭಭಾಯಿ ಪಟೇಲರ ದಿಟ್ಟ ನಿಲುವಿನಿಂದ ಕಲ್ಯಾಣ ಕರ್ನಾಟಕ ಭಾಗ ನಿಜಾಮನ ಆಡಳಿತದಿಂದ ವಿಮೋಚನೆಗೊಂಡಿತು. ಈ ನೆಲದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನಗಳನ್ನು ಯುವಪೀಳಿಗೆ ಸದಾ ಸ್ಮರಿಸಬೇಕು’ ಎಂದರು.

‘ಸೃಷ್ಟಿ, ಕಲೆ ಹಾಗೂ ವಾಸ್ತುಶಿಲ್ಪದ ಪ್ರತಿರೂಪವಾಗಿರುವ ವಿಶ್ವಕರ್ಮರ ಶ್ರಮ ಸಂಸ್ಕೃತಿಯ ಮೌಲ್ಯಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಕರೆ ನೀಡಿದರು.

ಕಾಲೇಜಿನ ಉಪನ್ಯಾಸಕರಾದ ಬಸಣ್ಣ, ವೀರೇಂದ್ರ, ಉತ್ತಮಕುಮಾರ್, ರಾಮಣ್ಣ, ಬಸವರಾಜ, ಬಸನಗೌಡ, ವಿಜಯಲಕ್ಷ್ಮಿ, ಯಶೋದ, ಶಂಕ್ರೆಮ, ನಿರ್ಮಲಾ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

janabhipraya

https://janabhipraya.com

Related Articles

Leave a Reply

Your email address will not be published. Required fields are marked *

Back to top button