ಕಲಬುರಗಿಜಿಲ್ಲೆ ಸುದ್ದಿ

ಶಿಕ್ಷಕರ ದಿನಾಚರಣೆ, ‘ಶಿಕ್ಷಕ ರತ್ನ’ ಪ್ರಶಸ್ತಿ ಪ್ರದಾನ

ಚಿತ್ತಾಪುರ: ಅನುದಾನ ರಹಿತ (ಖಾಸಗಿ) ಶಿಕ್ಷಣ ಸಂಸ್ಥೆಗಳು ಹಾಗೂ ಆಡಳಿತ ಮಂಡಳಿಗಳ ಒಕ್ಕೂಟದ ವತಿಯಿಂದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ‘ಶಿಕ್ಷಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ ಸೆ. 19ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ರಾವೂರಿನ ಶ್ರೀ ಸಿದ್ಧಲಿಂಗೇಶ್ವರ ಸಂಸ್ಥಾನ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದು, ಗೃಹ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ. ಖರ್ಗೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ವಿಧಾನ ಪರಿಷತ್ ಸದಸ್ಯ ಶಶೀಲ ನಮೋಶಿ ಅವರು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಲಿದ್ದಾರೆ. ಡಿಡಿಪಿಐ ಶಂಕ್ರಮ್ಮ ಧವಳಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ವೈದ್ಯ ಹಾಗೂ ಸಮಾಜ ಸೇವಕ ಡಾ. ಫಾರೂಕ್ ಮಣ್ಣೂರ, ಉದ್ಯಮಿ ಶಿವರೆಡ್ಡಿಗೌಡ ಪಾಟೀಲ್ ಹಾಗೂ ಒಕ್ಕೂಟದ ಜಿಲ್ಲಾಧ್ಯಕ್ಷ ಸುನಿಲ ಹುಡಗಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಗೌರವ ಸಲಹೆಗಾರರಾದ ನಾಗರೆಡ್ಡಿ ಪಾಟೀಲ್ ಕರದಾಳ, ಲಿಂಗರೆಡ್ಡಿಗೌಡ ಬಾಸರೆಡ್ಡಿ ನಾಲ್ವಾರ, ಅಮರೇಶ್ವರಿ ಬಾಬುರಾವ ಚಿಂಚನಸೂರ ಹಾಗೂ ಡಾ. ಚಂದ್ರಶೇಖರ ಕಾಂತ ಭಾಗವಹಿಸಲಿದ್ದಾರೆ ಎಂದು ಒಕ್ಕೂಟದ ತಾಲೂಕು ಅಧ್ಯಕ್ಷ ಜಗದೇವ ದಿಗ್ಗಾಂವಕರ್ ಹಾಗೂ ಕಾರ್ಯದರ್ಶಿ ರವಿ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದ್ದಾರೆ.

janabhipraya

https://janabhipraya.com

Related Articles

Leave a Reply

Your email address will not be published. Required fields are marked *

Back to top button