ಜೆಡಿಎಸ್ ಅಫಜಲಪೂರ ತಾಲೂಕು ಪದಾಧಿಕಾರಿಗಳ ನೇಮಕ

ಕಲಬುರಗಿ:ನಗರದ ಜಿಲ್ಲಾ ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷದ ಕಚೇರಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ನಾಟಿಕಾರ್ ಅವರ ಶಿಫಾರಸ್ಸಿನ ಮೇರೆಗೆ ಅಫಜಲಪೂರ ತಾಲೂಕು ಜೆಡಿಎಸ್ ಪದಾಧಿಕಾರಿಗಳ ನೇಮಕಾತಿ ಮಾಡಲಾಯಿತು.
ಈ ಸಂದರ್ಭದಲ್ಲಿ ಅಫಜಲಪೂರ ತಾಲೂಕು ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಸಿಂಗೆ, ಯುವ ಘಟಕದ ಅಧ್ಯಕ್ಷರಾಗಿ ಸಿದ್ದು ಪಾಟೀಲ್, ಹಿಂದುಳಿದ ವರ್ಗದ ಅಧ್ಯಕ್ಷರಾಗಿ ಬೀರಪ್ಪ ಪೂಜಾರಿ, ಜಿಲ್ಲಾ ಉಪಾಧ್ಯಕ್ಷರಾಗಿ ಶಂಕರಗೌಡ ಪಾಟೀಲ ಅವರನ್ನು ಜಿಲ್ಲಾಧ್ಯಕ್ಷರಾದ ಬಾಲರಾಜ್ ಅಶೋಕ ಗುತ್ತೇದಾರ ಅವರು ನೇಮಕಾತಿ ಆದೇಶ ಪತ್ರಗಳನ್ನು ನೀಡಿ ಸನ್ಮಾನಿಸಿದರು.
ಬಳಿಕ ಮಾತನಾಡಿದ ಬಾಲರಾಜ್ ಗುತ್ತೇದಾರ ಅವರು, ಪಕ್ಷವನ್ನು ತಾಲೂಕು ಮಟ್ಟದಲ್ಲಿ ತಳಮಟ್ಟದಿಂದ ಸಂಘಟಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಶಾಮರಾವ ಸೂರನ, ಬಸವರಾಜ ಬಿರಬಿಟ್ಟಿ, ರಾಮಚಂದ್ರ ಅಟ್ಟೂರ, ಮಹಾಂತಪ್ಪ ಮದರಿ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು, ಹಿರಿಯ ಮುಖಂಡರು, ಯುವ ನಾಯಕರು, ಕಾರ್ಯಕರ್ತರು ಹಾಗೂ ಪಕ್ಷದ ಅಭಿಮಾನಿಗಳು ಉಪಸ್ಥಿತರಿದ್ದರು.



