ಕಲಬುರಗಿಜಿಲ್ಲೆ ಸುದ್ದಿ

ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿ: ಜಾಂಭವ ಯುವ ಸೇನೆ ಆಗ್ರಹ

ಯಡ್ರಾಮಿ: ವಿವಿಧ ಇಲಾಖೆಗಳಲ್ಲಿರುವ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಗಳಿಗೆ ಮೀಸಲಾದ ಖಾಲಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಜಾಂಭವ ಯುವ ಸೇನೆ ತಾಲ್ಲೂಕು ಘಟಕ ಆಗ್ರಹಿಸಿದೆ.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ದೇವೇಂದ್ರ ಬಿಳವಾರ ನೇತೃತ್ವದಲ್ಲಿ ಸೆ.17ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಹಲವು ವರ್ಷಗಳಿಂದ ವಿವಿಧ ಇಲಾಖೆಗಳಲ್ಲಿರುವ ಎಸ್‌ಸಿ ಮತ್ತು ಎಸ್‌ಟಿ ವರ್ಗಗಳಿಗೆ ಮೀಸಲಾದ ಬ್ಯಾಕ್‌ಲಾಗ್ ಹುದ್ದೆಗಳು ಖಾಲಿ ಉಳಿದಿವೆ. ವಿದ್ಯಾಭ್ಯಾಸ ಪೂರ್ಣಗೊಳಿಸಿರುವ ಈ ಸಮುದಾಯಗಳ ಅನೇಕ ಯುವಕರು ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ. ಹಲವರ ವಯೋಮಿತಿ ಮುಗಿಯುವ ಹಂತದಲ್ಲಿದ್ದು, ಉದ್ಯೋಗಾವಕಾಶದಿಂದ ವಂಚಿತರಾಗುವ ಆತಂಕ ಎದುರಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಆದ್ದರಿಂದ ಮುಖ್ಯಮಂತ್ರಿ ಅವರು ಈ ವಿಚಾರಕ್ಕೆ ವಿಶೇಷ ಗಮನಹರಿಸಿ, ವಿವಿಧ ಇಲಾಖೆಗಳಲ್ಲಿರುವ ಎಸ್‌ಸಿ ಮತ್ತು ಎಸ್‌ಟಿ ವರ್ಗಗಳ ಬ್ಯಾಕ್‌ಲಾಗ್ ಹುದ್ದೆಗಳಿಗೆ ಕೂಡಲೇ ಅರ್ಜಿ ಆಹ್ವಾನಿಸಿ, ನೇಮಕಾತಿ ಪ್ರಕ್ರಿಯೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.

ಜಾಂಭವ ಯುವ ಸೇನೆಯ ಪ್ರಧಾನ ಕಾರ್ಯದರ್ಶಿ ಶಿವಪ್ಪ ಹಂಗರಗಾ (ಬಿ) ಸೇರಿದಂತೆ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button