ಕಲಬುರಗಿಜಿಲ್ಲೆ ಸುದ್ದಿ

ಹಿರಿಯ ನಾಗರಿಕರ ಸೇವೆಗೆ ಹೊಂಗೀರಣ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

ಚಿತ್ತಾಪುರ: ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಚಿತ್ತಾಪುರದ ಹೊಂಗೀರಣ ತಾಲೂಕು ಹಿರಿಯ ನಾಗರಿಕರ, ನಾಗರಿಕಿಯರ ಹಾಗೂ ವಯೋವೃದ್ಧರ ಕ್ಷೇಮಾಭಿವೃದ್ಧಿ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಲಬುರಗಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಗುರುವಾರ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ–2026 ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಅವರು ಸಂಘದ ಅಧ್ಯಕ್ಷ ಮೊಹಮ್ಮದ್ ಇಬ್ರಾಹಿಂ ಅವರಿಗೆ ಪ್ರಶಸ್ತಿ ಹಾಗೂ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು.

ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಅಧ್ಯಕ್ಷ ಅರುಣಕುಮಾರ ಲೋಯಾ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಹಿರಿಯ ನ್ಯಾಯವಾದಿ ರಾಜೇ ಶಿವಶರಣಪ್ಪ ವಿಶೇಷ ಉಪನ್ಯಾಸ ನೀಡಿದರು.

ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಹೊಂಗೀರಣ ಸಂಘವು ಉತ್ತಮ ಸೇವೆ ಸಲ್ಲಿಸುತ್ತಿರುವುದನ್ನು ಪರಿಗಣಿಸಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ–2026ರ ಅಂಗವಾಗಿ ಇಲಾಖೆಯಿಂದ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾದಿಕ್ ಹುಸೇನ್ ಖಾನ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ್ ರಾಠೋಡ ತಿಳಿಸಿದ್ದಾರೆ.

janabhipraya

https://janabhipraya.com

Related Articles

Leave a Reply

Your email address will not be published. Required fields are marked *

Back to top button