ಕಲಬುರಗಿಜಿಲ್ಲೆ ಸುದ್ದಿ

ನಾಗಾವಿ ಯಲ್ಲಮ್ಮ ದೇವಿಯ ಪಲ್ಲಕ್ಕಿ ಮಹೋತ್ಸವ: ಅ.7ರಂದು ಪೂರ್ವಭಾವಿ ಸಭೆ

ಚಿತ್ತಾಪುರ: ಪಟ್ಟಣದ ಐತಿಹಾಸಿಕ ಶ್ರೀ ನಾಗಾವಿ ಯಲ್ಲಮ್ಮ ದೇವಸ್ಥಾನದ ಪಲ್ಲಕ್ಕಿ ಮಹೋತ್ಸವ (ಜಾತ್ರೆ) ಅ.26ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಅ.7ರಂದು ಬೆಳಿಗ್ಗೆ 11 ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷರೂ ಆಗಿರುವ ತಹಸೀಲ್ದಾರ್ ನಾಗಯ್ಯ ಹಿರೇಮಠ ತಿಳಿಸಿದ್ದಾರೆ.

ಪಲ್ಲಕ್ಕಿ ಮಹೋತ್ಸವದ ಅಂಗವಾಗಿ ಕೈಗೊಳ್ಳಬೇಕಾದ ಸಿದ್ಧತೆಗಳು, ಮೂಲಸೌಕರ್ಯ, ಕುಡಿಯುವ ನೀರು, ವಿದ್ಯುತ್, ರಸ್ತೆ, ಸಂಚಾರ, ಪೊಲೀಸ್ ಬಂದೋಬಸ್ತ್, ಅಗ್ನಿಶಾಮಕ ವ್ಯವಸ್ಥೆ, ಆರೋಗ್ಯ ಸೇವೆ ಹಾಗೂ ಸಾರಿಗೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು.

ಸಭೆಗೆ ಚಿತ್ತಾಪುರ ಪುರಸಭೆಯ ಮುಖ್ಯಾಧಿಕಾರಿ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್, ವಿದ್ಯುತ್ ಪ್ರಸರಣ ನಿಗಮ, ಪೊಲೀಸ್ ಇಲಾಖೆ, ಅಗ್ನಿಶಾಮಕ ಠಾಣೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಿತ್ತಾಪುರ ಘಟಕ, ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು, ಪುರಸಭೆಯ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು, ದೇವಸ್ಥಾನದ ಅರ್ಚಕರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣ್ಯರನ್ನು ಆಹ್ವಾನಿಸಲಾಗಿದೆ.

ರತ್ನಾಕರ ನಾಯಕ ಸರಾಫ್, ಗೌತಮ್ ರಾಮರಾವ ನಾಯಕ ಸೇರಿದಂತೆ ಚಿತ್ತಾಪುರದ ವಿವಿಧ ಸಮಾಜಗಳ ಮುಖಂಡರು ಸಭೆಯಲ್ಲಿ ಪಾಲ್ಗೊಂಡು ಪಲ್ಲಕ್ಕಿ ಮಹೋತ್ಸವದ ಸಿದ್ಧತೆ ಕುರಿತು ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ದೇವಸ್ಥಾನ ಸಮಿತಿ ಮನವಿ ಮಾಡಿದೆ.

janabhipraya

https://janabhipraya.com

Related Articles

Leave a Reply

Your email address will not be published. Required fields are marked *

Back to top button