ಯಾದಗಿರಿ

ಕೆಂಭಾವಿಯಲ್ಲಿ ಅ.11ರಿಂದ ಮಹಾಲಕ್ಷ್ಮೀ ಮಂದಿರ ಲೋಕಾರ್ಪಣೆ, ಮೂರ್ತಿ ಪ್ರತಿಷ್ಠಾಪನಾ ಮಹೋತ್ಸವ

ಒಂಬತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮ, ಪುರಾಣ ಪ್ರವಚನ ಹಾಗೂ ಸಂಗೀತ ಸೇವೆ

ಕೆಂಭಾವಿ: ಪಟ್ಟಣದ ಸಂಜೀವನಗರ ಬಡಾವಣೆಯ ಶ್ರೀನಿಧಿ ಕಾಲೋನಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಹಾಲಕ್ಷ್ಮೀ ದೇವಿ ಮಂದಿರದ ಲೋಕಾರ್ಪಣೆ ಹಾಗೂ ಮೂರ್ತಿ ಪ್ರತಿಷ್ಠಾಪನಾ ಮಹೋತ್ಸವ ಅಕ್ಟೋಬರ್ 11ರಿಂದ 19ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಮಹೋತ್ಸವದ ಅಂಗವಾಗಿ ಮಾಗಣಗೇರಾ ಬೃಹನ್ಮಠದ ಷ.ಬ್ರ. ಡಾ. ವಿಶ್ವರಾಧ್ಯ ಶಿವಾಚಾರ್ಯರು, ಬೋರಗಿ ಪುರದಾಳದ ಮಹಾಲಿಂಗೇಶ್ವರ ಮಹಾಸ್ವಾಮಿಗಳು, ಕೆಂಭಾವಿ ಹಿರೇಮಠದ ಚನ್ನಬಸವ ಶಿವಾಚಾರ್ಯರು, ನಗನೂರು ಸೂಗುರೇಶ್ವರ ಶಿವಾಚಾರ್ಯರು, ಗುಂಡಕನಾಳದ ಗುರುಲಿಂಗ ಶಿವಾಚಾರ್ಯರು ಹಾಗೂ ಮುದನೂರು ಗಿರಿಧರ ಪಂಡಿತರಾಧ್ಯ ಶಿವಾಚಾರ್ಯರ ದಿವ್ಯ ಸಾನ್ನಿಧ್ಯದಲ್ಲಿ ಒಂಬತ್ತು ದಿನಗಳ ಕಾಲ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ.

ಅಕ್ಟೋಬರ್ 11ರಂದು ಪುರಾಣ ಪ್ರವಚನಕ್ಕೆ ಚಾಲನೆ ದೊರೆಯಲಿದ್ದು, ಅ.12ರಂದು ಶ್ರೀ ಮಹಾಲಕ್ಷ್ಮೀ ದೇವಿಯ ಮೂರ್ತಿಯ ಭವ್ಯ ಮೆರವಣಿಗೆ ಹಾಗೂ ಗಂಗಸ್ಥಳ ಕಾರ್ಯಕ್ರಮ ನಡೆಯಲಿದೆ. ಅ.15ರಂದು ಮುಖ್ಯ ಪೂಜೆ ಮತ್ತು ಚಂಡಿಕಾ ಹೋಮ-ಹವನಗಳು ಜರುಗಲಿವೆ. ಅ.16ರಂದು ಮಾಗಣಗೇರಾ ಬೃಹನ್ಮಠದ ಷ.ಬ್ರ. ಡಾ. ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಅಮೃತ ಹಸ್ತದಿಂದ ಶ್ರೀ ಮಹಾಲಕ್ಷ್ಮೀ ದೇವಿಯ ಮೂರ್ತಿ ಪ್ರತಿಷ್ಠಾಪನೆ ನೆರವೇರಲಿದೆ.

ಅ.19ರಂದು ಕುಂಭಕಳಸದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ದೇವಿಯ ವೈಭವದ ಮೆರವಣಿಗೆ ನಡೆಯಲಿದ್ದು, ಧರ್ಮಸಭೆ ಹಾಗೂ ಸುಮಂಗಲೆಯರಿಂದ ಉಡಿ ತುಂಬುವ ಕಾರ್ಯಕ್ರಮ ಆಯೋಜಿಸಲಾಗಿದೆ.

ಪುರಾಣ ಪ್ರವಚನ, ಸಂಗೀತ ಸೇವೆ

ಉತ್ಸವದ ಅಂಗವಾಗಿ ಅ.11ರಿಂದ ಸತತ ಒಂಬತ್ತು ದಿನಗಳ ಕಾಲ ಬ್ಯಾಡಗಿಹಾಳದ ಪಂಡಿತರತ್ನ ಶ್ರೀ ಸಿದ್ದರಾಮ ಸ್ವಾಮಿಗಳು ಪುರಾಣ ಪ್ರವಚನ ನಡೆಸಿಕೊಡಲಿದ್ದಾರೆ. ಗದಗದ ವೀರೇಶ್ವರ ಪುಣ್ಯಾಶ್ರಮದ ಕಲಾವಿದರಾದ ಅಶೋಕ ಕುಮಾರ ಹಾಗೂ ಕೃಷ್ಣ ಚೌಡಾಪುರ ಅವರಿಂದ ಸಂಗೀತ ಸೇವೆ ನಡೆಯಲಿದೆ.

ಮಂದಿರದ ಲೋಕಾರ್ಪಣೆ ಹಾಗೂ ಮೂರ್ತಿ ಪ್ರತಿಷ್ಠಾಪನಾ ಮಹೋತ್ಸವದ ಹಿನ್ನೆಲೆಯಲ್ಲಿ ಕೆಂಭಾವಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ದೇವಸ್ಥಾನ ಸಮಿತಿಯು ಪ್ರಕಟಣೆಯಲ್ಲಿ ಮನವಿ ಮಾಡಿದೆ.

janabhipraya

https://janabhipraya.com

Related Articles

Leave a Reply

Your email address will not be published. Required fields are marked *

Back to top button