ಕಲಬುರಗಿಜಿಲ್ಲೆ ಸುದ್ದಿ

ವಿದ್ಯಾರ್ಥಿನಿಯರು ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಲಿ: ಡಾ. ಪಂಡಿತ್ ಸಿ. ಬಿಳಮಗೆ

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಚಟುವಟಿಕೆಗಳ ಉದ್ಘಾಟನೆ; ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಸ್ವಾಗತ

ಕಲಬುರಗಿ: ನಗರದ ಜೇವರ್ಗಿ ಕಾಲೋನಿಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿವಿಧ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿನಿಯರ ಸ್ವಾಗತ ಸಮಾರಂಭ ನಡೆಯಿತು.

ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕ ಡಾ. ಪಂಡಿತ್ ಸಿ. ಬಿಳಮಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿನಿಯರು ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು. ಇಂತಹ ಚಟುವಟಿಕೆಗಳು ವಿದ್ಯಾರ್ಥಿನಿಯರಲ್ಲಿರುವ ಪ್ರತಿಭೆಯನ್ನು ಹೊರತರುವುದರ ಜತೆಗೆ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗುತ್ತವೆ. ವಿದ್ಯಾರ್ಥಿ ಜೀವನದಲ್ಲಿ ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ರಾಮಕೃಷ್ಣ ರೆಡ್ಡಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಕಾಲೇಜಿನ ಪ್ರಾಚಾರ್ಯ ಡಾ. ಪ್ರಕಾಶ ವಿ. ಮೊರಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜಿನಲ್ಲಿ ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿಬಿಎ ಹಾಗೂ ಎಂ.ಎ. ರಾಜ್ಯಶಾಸ್ತ್ರ, ಇತಿಹಾಸ, ಅರ್ಥಶಾಸ್ತ್ರ ಮತ್ತು ಕನ್ನಡ ವಿಷಯಗಳು, ಎಂ.ಎಸ್ಸಿ. ಹಾಗೂ ಎಂ.ಕಾಂ. ಮೊದಲ ವರ್ಷದ ತರಗತಿಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿನಿಯರನ್ನು ಸ್ವಾಗತಿಸಲಾಯಿತು.

ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಸಮಿತಿಯ ಕಾರ್ಯದರ್ಶಿ ಡಾ. ಜ್ಯೋತಿ ಕೆ.ಎಸ್., ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಎ ಮತ್ತು ಬಿ ಅಧಿಕಾರಿಗಳಾದ ಡಾ. ಸಂತೋಷ್ ಹುಂಪಿ ಹಾಗೂ ಡಾ. ಮೀನಾಕ್ಷಿ ವಿಜಯಕುಮಾರ್, ಐಕ್ಯೂಎಸಿ ಸಂಯೋಜಕ ಡಾ. ಶರಣಬಸಪ್ಪ ಚಿಕ್ಕಳ್ಳಿ, ಡಾ. ವಿದ್ಯಾ ಆರ್., ಸ್ಕೌಟ್ಸ್ ಮತ್ತು ಗೈಡ್ಸ್ ಸಂಚಾಲಕಿ ಡಾ. ಅನಸೂಯಾ ಪಾಟೀಲ, ಸಿಬ್ಬಂದಿ ಕಾರ್ಯದರ್ಶಿ ಡಾ. ರಾಮಲಿಂಗ ಎಂ. ಭೋಸಲೆ, ಮಹಿಳಾ ಸಿಬ್ಬಂದಿ ಕಾರ್ಯದರ್ಶಿ ಡಾ. ನಿಯಾಜ್ ಬೇಗಂ, ಭಾರತೀಯ ಯುವ ರೆಡ್‌ಕ್ರಾಸ್ ಸಂಯೋಜಕಿ ಡಾ. ಪದ್ಮಾವತಿ ಧನ್ನಿ, ಬುದ್ಧ-ಬಸವ-ಡಾ. ಬಿ.ಆರ್. ಅಂಬೇಡ್ಕರ್ ವೇದಿಕೆಯ ಪ್ರತಿನಿಧಿ ನಿತೀಶ್ ಭೂಶೆಟ್ಟಿ ಹಾಗೂ ಗ್ರಂಥಪಾಲಕ ಡಾ. ವಿನೋದಕುಮಾರ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ, ಅತಿಥಿ ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

janabhipraya

https://janabhipraya.com

Related Articles

Leave a Reply

Your email address will not be published. Required fields are marked *

Back to top button