ಕಲಬುರಗಿಜಿಲ್ಲಾಸುದ್ದಿ

ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಫಿರೋಜ್ ಪಟೇಲ್‌ಗೆ ಚಿನ್ನದ ಪದಕ

ಅಫಜಲಪುರ: ಕಲಬುರಗಿಯ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಅಫಜಲಪುರ ತಾಲೂಕಿನ ಅತನೂರ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿ ಫಿರೋಜ್ ಪಟೇಲ್ ಚಿನ್ನದ ಪದಕ ಹಾಗೂ ಕಂಚಿನ ಪದಕಗಳನ್ನು ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಫಿರೋಜ್ ಪಟೇಲ್ ತಮ್ಮ ಪ್ರತಿಭೆಯಿಂದ ಜಿಲ್ಲೆಯ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಕರಾಟೆ ಸಂಘದ ಅಧ್ಯಕ್ಷ ದಶರಥ ಮಮನ್ ಹಾಗೂ ಕರಾಟೆ ಶಿಕ್ಷಕಿ ಮಹಾದೇವಿ ಪೂಜಾರಿ ಉಪಸ್ಥಿತರಿದ್ದರು.

ವಿದ್ಯಾರ್ಥಿಯ ಸಾಧನೆಗೆ ಪೋಷಕರಾದ ದಿಲಶಾದಬಿ ವಹಾಬ್ ಅಲಿ ಪಟೇಲ್, ಸಹೋದರ ಉಸ್ಮಾನ್ ಪಟೇಲ್, ಸಹೋದರಿ ಮುಸ್ಕಾನ್ ಪಟೇಲ್ ಸೇರಿದಂತೆ ದೈಹಿಕ ಶಿಕ್ಷಣ ಪರಿವೀಕ್ಷಕ ಶ್ರೀಮಂತ ನಂದಗಾಂವ್, ಶಾಲೆಯ ಮುಖ್ಯಗುರುಗಳು ಮತ್ತು ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ. ಫಿರೋಜ್ ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡಿ ಜಿಲ್ಲೆಯ ಹೆಸರನ್ನು ರಾಜ್ಯ ಮಟ್ಟದಲ್ಲಿ ಹೊಳೆಯಿಸಲಿ ಎಂದು ಶುಭ ಹಾರೈಸಿದರು.

Related Articles

Leave a Reply

Your email address will not be published. Required fields are marked *

Back to top button