ಕಲಬುರಗಿಜಿಲ್ಲಾಸುದ್ದಿ
ಎಸ್ಎಸ್ಎಲ್ಸಿಯಲ್ಲಿ 84.64%: ಗೌರ (ಬಿ) ಗ್ರಾಮದ ವೇದಾಂತಗೆ ಗಮನಾರ್ಹ ಸಾಧನೆ

ಕಲಬುರಗಿ: ಅಫಜಲಪುರ ತಾಲೂಕಿನ ಗೌರ (ಬಿ) ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿ ವೇದಾಂತ ಶಿವಶರಣಪ್ಪ ಗೌರ ಅವರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 84.64% ಅಂಕಗಳನ್ನು ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.
ಕಲಬುರಗಿಯ ಸೇಂಟ್ ಮೆರಿ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅವರು ಪರಿಶ್ರಮ, ನಿಯಮಿತ ಅಭ್ಯಾಸ ಹಾಗೂ ಶಿಕ್ಷಕರ ಮಾರ್ಗದರ್ಶನದ ಫಲವಾಗಿ ಈ ಯಶಸ್ಸು ಸಾಧಿಸಿದ್ದಾರೆ. ಅವರ ಸಾಧನೆಗೆ ಪೋಷಕರು, ಶಿಕ್ಷಕರು ಹಾಗೂ ಸ್ನೇಹಿತರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಮುಂದಿನ ದಿನಗಳಲ್ಲಿ ವಿಜ್ಞಾನ ವಿಭಾಗದಲ್ಲಿ ಇನ್ನಷ್ಟು ಉನ್ನತ ಸಾಧನೆ ಮಾಡುವ ಉದ್ದೇಶವನ್ನು ವೇದಾಂತ ವ್ಯಕ್ತಪಡಿಸಿದ್ದು, ಅವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ.




