ಜಿಲ್ಲಾಸುದ್ದಿಯಾದಗಿರಿ

ಸಿದ್ದರಾಮಯ್ಯ ಅವರನ್ನೆ ಐದು ವರ್ಷ ಮುಂದುವರಿಸಿ ಇಲ್ಲವಾದಲ್ಲಿ ಉಗ್ರ ಹೋರಾಟ

ಶಹಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪೂರ್ಣ ಐದು ವರ್ಷಗಳ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕು ಎಂದು ಕುರುಬ ಸಮಾಜದ ಯುವ ಮುಖಂಡ ಮರ್ದಾನಿ ಸಲಾದಪುರ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡುತ್ತಿದ್ದು, ರಾಜ್ಯದ ಜನರ ವಿಶ್ವಾಸ ಗಳಿಸಿದೆ ಎಂದು ಹೇಳಿದರು.

ಧರ್ಮ–ಜಾತಿ ಭೇದವಿಲ್ಲದೆ ಸಮಾನತೆಯ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಅವರು ಅಹಿಂದ ವರ್ಗಗಳ ಆಶಾಕಿರಣವಾಗಿದ್ದು, ದೀನದಲಿತರ ಏಳಿಗೆಗಾಗಿ ಶ್ರಮಿಸಿದ ನಾಯಕರೆಂದು ಅವರು ಬಣ್ಣಿಸಿದರು.

ಇಂತಹ ಜನಪ್ರಿಯ ನಾಯಕನನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬಾರದು. ಒಂದು ವೇಳೆ ಬದಲಾವಣೆ ಮಾಡಿದರೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಮಟ್ಟದ ರಾಜಕೀಯ ನಷ್ಟ ಉಂಟಾಗಲಿದೆ ಎಂದು ಎಚ್ಚರಿಸಿದರು.

ಸಿದ್ದರಾಮಯ್ಯ ಅವರ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಬೇಕು. ಇಡೀ ರಾಜ್ಯವೇ ಅವರ ಆಡಳಿತವನ್ನು ಒಪ್ಪಿಕೊಂಡಿದ್ದು, ಅವರಿಗೆ ಗೌರವಯುತ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ ಕುರುಬ ಸಮಾಜದ ವತಿಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮರ್ದಾನಿ ಸಲಾದಪುರ ಎಚ್ಚರಿಕೆ ನೀಡಿದರು.

Show More

Related Articles

Leave a Reply

Your email address will not be published. Required fields are marked *

Back to top button