ಪ್ರಿಯಾಂಕ್ ಖರ್ಗೆ ಅವರಿಗೆ ಗೌತಮ ಬುದ್ಧರ ಪ್ರತಿಮೆ ನೀಡಿ ಸನ್ಮಾನ

ಬೆಂಗಳೂರು:ರಾಜ್ಯದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರನ್ನು ಬೆಂಗಳೂರಿನಲ್ಲಿ ಕೋಲಿ ಕಬ್ಬಲಿಗ ಎಸ್ಟಿ ಹೋರಾಟ ಸಮಿತಿ ಹಾಗೂ ಕಾಂಗ್ರೆಸ್ ಮುಖಂಡರು ಭೇಟಿ ಮಾಡಿ ಗೌತಮ ಬುದ್ಧರ ಪ್ರತಿಮೆ ನೀಡಿ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಸಮಿತಿಯ ಪ್ರಮುಖರಾದ ಲಚ್ಚಪ್ಪ ಜಮಾದಾರ ಅವರು ಸಚಿವರನ್ನು ಸನ್ಮಾನಿಸಿ, ಸಮಾಜದ ವಿವಿಧ ಬೇಡಿಕೆಗಳ ಕುರಿತು ಸಚಿವರೊಂದಿಗೆ ಚರ್ಚೆ ನಡೆಸಿದ ಮುಖಂಡರು, ಮುಂದಿನ ದಿನಗಳಲ್ಲಿ ಕೋಲಿ ಕಬ್ಬಲಿಗ ಸಮುದಾಯದ ಹಕ್ಕುಗಳಿಗಾಗಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು.
ಸಚಿವ ಪ್ರಿಯಾಂಕ್ ಖರ್ಗೆ ಅವರು ಸಮಾಜದ ಮುಖಂಡರ ಅಭಿನಂದನೆಗಳನ್ನು ಸ್ವೀಕರಿಸಿ, ಸಮುದಾಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು. ಸಮಾಜದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅವರ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಗುಡುಬಾ, ಅಂಬರಾಯ ಜವಳಗಾ, ಸಿದ್ದಪ್ಪ ಸಿನೂರ, ರಾಮಲಿಂಗ ನಾಟಿಕಾರ, ಮರೆಪ್ಪ ಹಳ್ಳಿ, ನಾಗೇಂದ್ರಪ್ಪ ಲಿಂಗಪ್ಪಲ್ಲಿ, ಸಾಬಣ್ಣ ತೋಟನಳ್ಳಿ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಕಾರ್ಯಕ್ರಮವು ಆತ್ಮೀಯ ಹಾಗೂ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು.




