ಕಲಬುರಗಿಜಿಲ್ಲಾಸುದ್ದಿ
ಕಾರ್ಮಿಕರ ಹೋರಾಟಗಳ ಮೇಲೆ ದಮನಕಾರಿ ಕ್ರಮ ಖಂಡಿಸಿ ಪ್ರತಿಭಟನೆ

ಕಲಬುರಗಿ: ನೋಯ್ಡಾ, ಗ್ರೇಟರ್ ನೋಯ್ಡಾ, ಗುರುಗ್ರಾಮ ಸೇರಿದಂತೆ ರಾಷ್ಟ್ರೀಯ ರಾಜಧಾನಿ ವಲಯದಲ್ಲಿ ಕಾರ್ಮಿಕರು ನಡೆಸುತ್ತಿರುವ ಹೋರಾಟಗಳ ಮೇಲೆ ಉತ್ತರ ಪ್ರದೇಶ ಹಾಗೂ ಹರಿಯಾಣದ ಬಿಜೆಪಿ ನೇತೃತ್ವದ ಸರ್ಕಾರಗಳು ಕೈಗೊಳ್ಳುತ್ತಿರುವ ದಮನಕಾರಿ ಕ್ರಮಗಳನ್ನು ಖಂಡಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಎಸ್‌ವಿಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಕಾರ್ಮಿಕರ ಹಕ್ಕುಗಳನ್ನು ಹತ್ತಿಕ್ಕುವ ಕ್ರಮಗಳನ್ನು ತಕ್ಷಣವೇ ನಿಲ್ಲಿಸಬೇಕೆಂದು ಆಗ್ರಹಿಸಿದರು. ಕಾರ್ಮಿಕರ ನ್ಯಾಯಸಮ್ಮತ ಬೇಡಿಕೆಗಳಿಗೆ ಸ್ಪಂದಿಸುವಂತೆ ಸರ್ಕಾರಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಎಂ.ಬಿ. ಸಜ್ಜನ್, ಶಾಂತಾ ಘಂಟೆ, ನಾಗಯ್ಯಸ್ವಾಮಿ, ಗೌರಮ್ಮ ಪಾಟೀಲ, ಶೇಕಮ್ಮ ಕುರಿ ಸೇರಿದಂತೆ ಹಲವರು ಭಾಗವಹಿಸಿದ್ದರು.




