ಕಲಬುರಗಿಜಿಲ್ಲಾಸುದ್ದಿ
ಡಿ. 7ರಂದು ನಾಗನಹಳ್ಳಿ ಅವರಿಗೆ “ಸಜ್ಜನ ಸಿರಿ” ಪ್ರಶಸ್ತಿ ಪ್ರದಾನ ಸಮಾರಂಭ

ಕಲಬುರಗಿ:ಜಿಲ್ಲಾ ಮತ್ತು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ, ಸಾಹಿತ್ಯಾಸಕ್ತ ಸ್ನೇಹಜೀವಿ ಲಿಂ. ಗುರುಬಸಪ್ಪ ಸಜ್ಜನಶೆಟ್ಟಿ ಅವರ ಸ್ಮರಣಾರ್ಥವಾಗಿ ಆಯೋಜಿಸಲಾಗಿರುವ “ಸಜ್ಜನ ಸಿರಿ” ಪ್ರಶಸ್ತಿ ಪ್ರದಾನ ಸಮಾರಂಭ ಡಿಸೆಂಬರ್ 7, 2025 ರಂದು ಬೆಳಗ್ಗೆ 11.45ಕ್ಕೆ ಕನ್ನಡ ಭವನ, ಕಲಬುರಗಿಯಲ್ಲಿ ಜರುಗಲಿದೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾಹಿತಿ ನೀಡಿದ್ದು, ಈ ಸಂದರ್ಭದಲ್ಲಿ ಕೋಟನೂರು (ಡಿ) ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶ್ರೀ ಮಲ್ಲಿನಾಥ ನಾಗನಹಳ್ಳಿ ಅವರಿಗೆ ವಿಶೇಷ ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಮಾಡಲಾಗಲಿದೆ ಎಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ, ಸಂಸ್ಕೃತಿ ಹಾಗೂ ಸಮಾಜಮುಖಿ ಸೇವೆಗೆ ಮಹತ್ತರ ಕೊಡುಗೆ ನೀಡಿದ ವ್ಯಕ್ತಿಗಳನ್ನು ಗೌರವಿಸುವ ಉದ್ದೇಶದಿಂದ ಆಯೋಜಿಸಲಾಗಿದೆ ಎಂದು ಪರಿಷತ್ ತಿಳಿಸಿದೆ.



