ಕಲಬುರಗಿಜಿಲ್ಲಾಸುದ್ದಿ

ಸರ್ಕಾರಿ ಮಹಾವಿದ್ಯಾಲಯದಲ್ಲಿ ಪದವಿ ಪ್ರವೇಶ ಪ್ರಕ್ರಿಯೆಗೆ ಚಾಲನೆ

ಕಲಬುರಗಿ: ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ 2026–27ನೇ ಸಾಲಿನ ಬಿಎ, ಬಿಕಾಂ ಹಾಗೂ ಬಿಎಸ್ಸಿ ಪ್ರಥಮ ವರ್ಷದ ಪ್ರವೇಶ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.

ಪ್ರಾಂಶುಪಾಲೆ ಡಾ. ಸವಿತಾ ತಿವಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರವೇಶ ಪ್ರಕ್ರಿಯೆಯನ್ನು ಅಧಿಕೃತವಾಗಿ ಆರಂಭಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣವನ್ನು ಪಡೆದು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಡಾ. ಶ್ರೀಮಂತ ಬಿ. ಹೋಳಕರ, ಡಾ. ರಮೇಶ್ ಪೋತೆ, ಡಾ. ಬಲಭೀಮ ಸಾಂಗ್ಲಿ, ಡಾ. ಬಸಂತ ಸಾಗರ, ಶೆಶಿಕಿರಣ ಹಂಚನಾಳ, ಮೀನಾಕ್ಷಿ ರಾಡೋಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Show More

Related Articles

Leave a Reply

Your email address will not be published. Required fields are marked *

Back to top button