ಯಾದಗಿರಿ

ಕಲ್ಯಾಣ ಕರ್ನಾಟಕ ವಿಮೋಚನೆ ಅಭಿವೃದ್ಧಿಗೆ ವರದಾನ: ಶಿವಶರಣಪ್ಪ ವಾಡಿ

ಕೆಂಭಾವಿ: ಕಲ್ಯಾಣ ಕರ್ನಾಟಕ ವಿಮೋಚನೆಯು ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ದೊಡ್ಡ ವರದಾನವಾಗಿದೆ ಎಂದು ಶಿವಶರಣಪ್ಪ ವಾಡಿ ಹೇಳಿದರು.

ಕೆಂಭಾವಿ ಸಮೀಪದ ಮಾಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ 79ನೇ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ಮುಕ್ತಿ ಪಡೆದು ಭಾರತ ಒಕ್ಕೂಟಕ್ಕೆ ಸೇರಿದ ಸೆಪ್ಟೆಂಬರ್ 17ರ ದಿನವು ಈ ಭಾಗದ ಜನರ ಸ್ವಾಭಿಮಾನದ ಸಂಕೇತವಾಗಿದೆ ಎಂದರು.

ಕಲ್ಯಾಣ ಕರ್ನಾಟಕದ ಜನರು ನಡೆಸಿದ ಹೋರಾಟ, ತ್ಯಾಗ ಹಾಗೂ ಬಲಿದಾನಗಳ ಫಲವಾಗಿ ಈ ಪ್ರದೇಶವು ಇಂದು ಶಿಕ್ಷಣ, ಆರ್ಥಿಕತೆ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಪ್ರಗತಿಯತ್ತ ಸಾಗುತ್ತಿದೆ. ವಿಮೋಚನಾ ದಿನದ ಇತಿಹಾಸವನ್ನು ಇಂದಿನ ಹಾಗೂ ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಗ್ರಾಮದ ಮುಖಂಡರು, ಎಸ್‌ಡಿಎಂಸಿ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಧ್ವಜಾರೋಹಣ ನೆರವೇರಿಸಿ, ಕಲ್ಯಾಣ ಕರ್ನಾಟಕ ವಿಮೋಚನಾ ಹೋರಾಟದಲ್ಲಿ ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಲಾಯಿತು.

janabhipraya

https://janabhipraya.com

Related Articles

Leave a Reply

Your email address will not be published. Required fields are marked *

Back to top button