ಕಲಬುರಗಿಜಿಲ್ಲೆ ಸುದ್ದಿ

ಶಿಕ್ಷಕರ ಸೇವೆ ಸಮಾಜದ ಭವಿಷ್ಯ ರೂಪಿಸುವ ಶಕ್ತಿ: ಶಶೀಲ್ ನಮೋಶಿ

ಕಲಬುರಗಿ: ಶಿಕ್ಷಕರು ಸಮಾಜಕ್ಕೆ ಜ್ಞಾನ, ಸಂಸ್ಕಾರ ಹಾಗೂ ಮೌಲ್ಯಗಳನ್ನು ನೀಡುವ ಮೂಲಕ ಉತ್ತಮ ಭವಿಷ್ಯ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಹೇಳಿದರು.

ನಗರದ ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ರಾಜಾಪುರದ ಡಾ. ರಾಜಕುಮಾರ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ಉತ್ಸವ, ಸಾಧಕರತ್ನ, ಆದರ್ಶ ಶಿಕ್ಷಕ ಹಾಗೂ ವೈದ್ಯ ದಂಪತಿ ಪ್ರಶಸ್ತಿ ಪ್ರದಾನ, ಕಲ್ಯಾಣ ಕರ್ನಾಟಕ ವಿದ್ಯಾರ್ಥಿರತ್ನ ಪ್ರಶಸ್ತಿ ಪ್ರದಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಕ್ಷಕರ ಸೇವೆಯನ್ನು ಗೌರವಿಸುವುದು ಸಮಾಜದ ಕರ್ತವ್ಯ. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಇಂತಹ ಕಾರ್ಯಕ್ರಮಗಳು ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಶಿಕ್ಷಕರು, ಸಾಧಕರು ಹಾಗೂ ವೈದ್ಯ ದಂಪತಿಯನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ‘ಕಲ್ಯಾಣ ಕರ್ನಾಟಕ ವಿದ್ಯಾರ್ಥಿರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಳಿಕ ವಿದ್ಯಾರ್ಥಿಗಳು ಹಾಗೂ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದಲ್ಲಿ ಕೆಂಭಾವಿಯ ಚನ್ನಬಸವ ಶಿವಾಚಾರ್ಯರು, ಡಾ. ಶರಣಪ್ಪ ಎಸ್.ಡಿ., ಕರ್ಣಕುಮಾರ ಜೈನಾಪುರ, ಡಾ. ಶರಣಪ್ಪ ಗುಂಡಗುರ್ಥಿ, ಸಂಘದ ಅಧ್ಯಕ್ಷ ಪ್ರೊ. ರಮೇಶ ಬಿ. ಯಾಳಗಿ, ಕಾರ್ಯದರ್ಶಿ ಯಲ್ಲಾಲಿಂಗ ದಂಡಿನ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button