ಬಿಜೆಪಿ ಎಸ್ ಟಿ ಮೋರ್ಚಾ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ದೇವು ಎನ್. ಜಮಾದಾರ ಆಯ್ಕೆ

ಕಲಬುರಗಿ: ಭಾರತೀಯ ಜನತಾ ಪಾರ್ಟಿ ಕಲಬುರಗಿ ತಾಲೂಕಿನ ಇಟಾಗ–ಅಹಮದಾಬಾದ್ ಗ್ರಾಮದ ಭೂತ ಅಧ್ಯಕ್ಷರಾಗಿ ಹಾಗೂ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಎಸ್ಟಿ ಮೋರ್ಚಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದನ್ನು ಮನಗಂಡು, ದೇವು ಎನ್. ಜಮಾದಾರ್ ಅವರನ್ನು ಭಾರತೀಯ ಜನತಾ ಪಾರ್ಟಿಯ ಕಲಬುರಗಿ ಎಸ್ಟಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.
ಈ ಆಯ್ಕೆ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು, ಕಲಬುರಗಿ ಗ್ರಾಮೀಣ ಶಾಸಕರಾದ ಬಸವರಾಜ ಮತ್ತಿಮಡು, ಬಿಜೆಪಿ ಜಿಲ್ಲಾಧ್ಯಕ್ಷರಾದ ಅಶೋಕ್ ಬಗಲಿ, ಜಿಲ್ಲೆಯ ಬಿಜೆಪಿ ಪಕ್ಷದ ಹಿರಿಯ ನಾಯಕರು, ಪ್ರಮುಖರು, ಕಾರ್ಯಕರ್ತರು ಹಾಗೂ ಸಮಾಜದ ಮುಖಂಡರಿಗೆ ದೇವು ಎನ್. ಜಮಾದಾರ್ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ನನ್ನ ಮೇಲೆ ಪಕ್ಷ ವಿಶ್ವಾಸ ಇಟ್ಟು ಮಹತ್ತರ ಜವಾಬ್ದಾರಿಯನ್ನು ನೀಡಿದೆ. ಈ ಜವಾಬ್ದಾರಿಯನ್ನು ಶ್ರದ್ಧೆಯಿಂದ, ನಿಷ್ಠೆಯಿಂದ ಹಾಗೂ ಪ್ರಾಮಾಣಿಕವಾಗಿ ನಿಭಾಯಿಸಿ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸುವೆನು ಎಂದು ದೇವು ಎನ್. ಜಮಾದಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



