ಜ. 4ರಂದು ಮಾತೆ ಸಾವಿತ್ರಿಬಾಯಿ ಫುಲೆ–ಜ್ಯೋತಿಬಾ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭ

ಕಲಬುರಗಿ: ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಫೆಡರೇಷನ್, ನವದೆಹಲಿ, ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಹಾಗೂ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಫ್ಯಾಮಿಲಿ ಟ್ರಸ್ಟ್ ದಾಸೋಹ ಮಹಾಮನೆ ಶರಣಬಸವೇಶ್ವರ ಸಂಸ್ಥಾನದ ಸಹಯೋಗದಲ್ಲಿ 66ನೇ ಮಾತೆ ಸಾವಿತ್ರಿಬಾಯಿ ಫುಲೆ ಜಯಂತ್ಯೋತ್ಸವದ ಅಂಗವಾಗಿ ಮಾತೆ ಸಾವಿತ್ರಿಬಾಯಿ ಫುಲೆ ಹಾಗೂ ಜ್ಯೋತಿಬಾ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜನವರಿ 4ರಂದು (ರವಿವಾರ) ಬೆಳಿಗ್ಗೆ 11.15ಕ್ಕೆ ನಗರದ ಶರಣಬಸವೇಶ್ವರ ಸಂಸ್ಥಾನ ಆವರಣದಲ್ಲಿರುವ ಅಖಿಲ ಭಾರತ ಶಿವಾನುಭವ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಸೇವಂತಾ ಪಿ. ಚವ್ಹಾಣ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾವಿತ್ರಿ ಎಸ್. ಪಾಟೀಲ ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶರಣಬಸವೇಶ್ವರ ಸಂಸ್ಥಾನದ ಚೇರಮನ್ ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಿಣಿ ಎಸ್. ಅಪ್ಪ ಅವರು ವಹಿಸಲಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜೈವಿಕ ತಂತ್ರಜ್ಞಾನ ಸಚಿವರು ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಸಮಾರಂಭವನ್ನು ಉದ್ಘಾಟಿಸುವರು. ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಘನ ಉಪಸ್ಥಿತಿ ವಹಿಸುವರು.
ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಫೆಡರೇಷನ್ ನವದೆಹಲಿ ರಾಷ್ಟ್ರೀಯ ಅಧ್ಯಕ್ಷೆ ಡಾ. ಲತಾ ಎಸ್. ಮುಳ್ಳೂರ ಅವರು ಮಾತೆ ಸಾವಿತ್ರಿಬಾಯಿ ಫುಲೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವರು. ಕ.ಸಾ.ಪು.ಶಿ.ಸಂಘ (ರಿ.) ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷೆ ಸೇವಂತಾ ಪಿ. ಚವ್ಹಾಣ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾವಿತ್ರಿ ಎಸ್. ಪಾಟೀಲ ನೇತೃತ್ವ ವಹಿಸುವರು.
ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಶಾಸಕರಾದ ಡಾ. ಅಜಯಸಿಂಗ್, ಅಲ್ಲಮಪ್ರಭು ಪಾಟೀಲ, ಕನೀಜ್ ಫಾತೀಮಾ, ಬಸವರಾಜ ಮತ್ತಿಮೂಡ, ಮೇಯರ್ ವರ್ಷಾ ರಾಜೀವ ಜಾನೆ, ಉಪಮೇಯರ್ ತೃಪ್ತಿ ಶ್ರೀನಿವಾಸ ಲಾಖೆ, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಬಿ.ಜಿ. ಪಾಟೀಲ, ಶಶೀಲ ನಮೋಶಿ, ಚಂದ್ರಶೇಖರ ಪಾಟೀಲ, ಡಾ. ತಳವಾರ ಸಾಬಣ್ಣ, ಸುನೀಲ ವಲ್ಲ್ಯಾಪೂರೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಶರಣಕುಮಾರ ಮೋದಿ, ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಸೇರಿದಂತೆ ಅನೇಕ ಗಣ್ಯರು ಗೌರವ ಉಪಸ್ಥಿತರಾಗಿ ಭಾಗವಹಿಸಲಿದ್ದಾರೆ.
ಇದಲ್ಲದೆ ಅಪರ ಆಯುಕ್ತ ತುಕಾರಾಮ, ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ., ಕ.ರಾ.ಸ.ನೌ.ಸಂಘ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಆಡಳಿತ) ಉಪನಿರ್ದೇಶಕ ಸೂರ್ಯಕಾಂತ ಮದಾನೆ, ಬಸವರಾಜ ಶೆಟ್ಟಿ, ಗೌರೆ ರಾಜಶೇಖರ, ವಿಜಯಕುಮಾರ ಜಮಖಂಡಿ, ಸೋಮಶೇಖರ ಹಂಚನಾಳ, ಡಾ. ಸುರೇಶ ಎಲ್. ಶರ್ಮಾ ಸೇರಿದಂತೆ ಹಲವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಈ ಮಹತ್ವದ ಕಾರ್ಯಕ್ರಮಕ್ಕೆ ರಾಜಕೀಯ ಮುಖಂಡರು, ಸಂಘದ ಪದಾಧಿಕಾರಿಗಳು, ಸದಸ್ಯರು, ಮಹಿಳೆಯರು ಹಾಗೂ ಸಮಸ್ತ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.



