ಕಲಬುರಗಿಜಿಲ್ಲಾಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ

ಕಲಬುರಗಿ: ನೀಟ್ ಯುಜಿ–2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಮಗ್ರ ತನಿಖೆ ನಡೆಸಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ನೀಟ್ ಪರೀಕ್ಷೆಯ ಪಾರದರ್ಶಕತೆ ಮತ್ತು ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟುಮಾಡುವ ಘಟನೆಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸರ್ವೇಶ ಮಾವಿನ, ಸುಜಾತ ವೈ., ಪ್ರದೀಪ, ಇಮಾಮಸಾಬ್, ತಾಯಣ್ಣ, ಪ್ರೇಮದಾಸ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Show More

Related Articles

Leave a Reply

Your email address will not be published. Required fields are marked *

Back to top button