ರಸೀದ್ ಮುತ್ಯಾಗೆ ರಕ್ಷಣೆ ನೀಡಿ : ಮಂಜುನಾಥ ಭಂಡಾರಿ ಮನವಿ

ಕಲಬುರಗಿ: ಮಕ್ಕಳಿಲ್ಲದ ಕುಟುಂಬಕ್ಕೆ ಮಕ್ಕಳ ಭಾಗ್ಯ ಕಲ್ಪಿಸಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಾಂತ್ವಾನ ಹೇಳಿ ಅವರ ಕಷ್ಟಕಾರ್ಪಣ್ಯಗಳಿಂದ ಹೊರಬರಲು ಸೂಕ್ತ ಮಾರ್ಗದರ್ಶನ ಮಾಡಿ ಸಾಮಾಜಿಕವಾಗಿ ನಿಸ್ವಾ ರ್ಥದಿಂದ ಸೇವೆ ಸಲ್ಲಿಸುತ್ತಿರುವ ರಸೀದ ಮುತ್ಯಾ ಅವರಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಿ ರಕ್ಷಣೆ ನೀಡಬೇಕೆಂದು ದಲಿತ ಸೇನೆಯ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ರಾಮಸ್ಥರಲ್ಲಿ ಅವರಿಗಾ ಗದವರು ಅವರ ವಿರುದ್ಧ ಕುತಂತ್ರಗಳನ್ನು ರೂಪಿಸಿ ಅವರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿರುವವರ ಪತ್ತೆ ಹಚ್ಚಿ ಅವರಿಗೆ ಸೂಕ್ತ ಕಾನೂನು ಪ್ರಕಾರ ಶಿಕ್ಷೆ ನೀಡಬೇಕೆಂದು ಮನವಿ ಮಾಡಿದ್ದಾರೆ.
ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿ ರಸೀದ ಮುತ್ಯಾ ಅವರ ವಿರುದ್ಧ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಏಕೆಂದರೆ ಅಷ್ಟೊಂದು ಜನರು ಅವರ ಮಾರ್ಗದರ್ಶನದಲ್ಲಿ ತಮ್ಮ ಬದುಕನ ನ್ನು ಹಸನುಗೊಳಿಸಿಕೊಳ್ಳುತ್ತಿದ್ದಾರೆ ಇದಕ್ಕೆ ಅದೆಷ್ಟೇ ಅವರ ಭಕ್ತರೇ ಸಾಕ್ಷಿ ಯಾಗಿದ್ದಾರೆ. ಇದನ್ನು ಸಹಿಸದ ಕೆಲವರು ಅವರ ವಿರುದ್ಧ ಪಿತೂರಿ ಮಾಡುತ್ತಿರುವುದು ಸರಿಯಲ್ಲ, ಕೂಡಲೇ ಸರಕಾರ ಅವರಿಗೆ ರಕ್ಷಣೆ ನೀಡಬೇಕೆಂದು ಮನವಿ ಮಾಡಿದ್ದಾರೆ.



